ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ಇದರ ಬೆಳ್ಳಂಪಳ್ಳಿ ಶಾಖೆಯು ಹವಾನಿಯಂತ್ರಿತವಾಗಿ ನವೀಕೃತಗೊಂಡಿದ್ದು, ಉದ್ಘಾಟನಾ ಸಮಾರಂಭ ದಿ. 08-04-2026, ಬುಧವಾರ ದಂದು ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.
ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ, ಆನೆಗುಂದಿ ಮಹಾಸಂಸ್ಥಾನ ಹಾಗೂ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಶಿವ ಸುಜ್ಞಾನ ತೀರ್ಥ ಮಹಾಸ್ವಾಮೀಜಿಗಳವರು, ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ಅರೆಮಾದನಹಳ್ಳಿ ಇವರಿಂದ ಉದ್ಘಾಟನೆ, ದೀಪ ಪ್ರಜ್ವಲನೆ ಮತ್ತು ಆಶೀರ್ವಚನ ನೆರವೇರಲಿದೆ. ಎಸ್.ಕೆ.ಜಿ.ಐ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಬಿ. ಜಯಕರ ಶೆಟ್ಟಿ ಇಂದ್ರಾಳಿ, ಲಾವಣ್ಯ ಆರ್.ಕೆ, ಬಿ ಅಶೋಕ್ ಕುಮಾರ್ ಶೆಟ್ಟಿ, ಸೀತಾರಾಮ ಶೆಟ್ಟಿಗಾರ್ ಸಿ, ಅಚ್ಚುತ ಆಚಾರ್ಯ, ಶ್ರೀ ಪ್ರಸನ್ನ ಪ್ರಭು ಮುಂತಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ನ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಗ್ರಾಹಕರ ಉಪಸ್ಥಿತಿ ಹಾಗೂ ಸಹಕಾರ ಕೋರಿದ್ದಾರೆ.

















