ಸೇನಾ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿದ್ದು, ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಮೇ 2 ರಂದು ನಡೆಯಲಿರುವ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್‌ಸೈಟ್ https://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.