ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್, ಆಶ್ಲೇ ಫರ್ನಾಂಡಿಸ್, ಅಂಶಿಕಾ ಹಾಗೂ ಅನನ್ಯ ಭಟ್ ಅವರು ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಬ್ಲಾಕ್ ಚೈನ್ ಹ್ಯಾಕಥಾನ್ “HACK.ALGO” ನಲ್ಲಿ ದ್ವಿತೀಯ ಸ್ಥಾನದೊಂದಿಗೆ 200 ಅಮೆರಿಕನ್ ಡಾಲರ್ ನಗದು ಬಹುಮಾನವನ್ನು ಪಡೆದಿರುತ್ತಾರೆ.
ಈ ಕಾರ್ಯಕ್ರಮವನ್ನು ಅಲ್ಗೋಭಾರತ್ ಸಂಸ್ಥೆ, ಗೂಗಲ್ ಡೆವಲಪರ್ ಗ್ರೂಪ್ ಮತ್ತು ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ದಿನಾಂಕ 10 ಮತ್ತು 11 ಎಪ್ರಿಲ್ 2026
ರಂದು ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿದ್ದಾರೆ.

















