ಕಾರ್ಕಳ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಬಾಹುಬಲಿ ಸ್ವಾಮಿಗೆ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯಾಗಿದ್ದು, ಮಹೋತ್ಸವವು 2027 ಫೆ.18ರಿಂದ 28ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.

ಕರ್ನಾಟಕದಲ್ಲಿ ಶ್ರವಣಬೆಳಗೊಳದ ನಂತರದ ಅತಿ ಎತ್ತರದ ಏಕಶಿಲಾ ಗೊಮ್ಮಟೇಶ್ವರ ಮೂರ್ತಿ ಎಂದು ಪ್ರಸಿದ್ಧವಾಗಿರುವ ಕಾರ್ಕಳದ ಬಾಹುಬಲಿಗೆ ಮಹಾಮಜ್ಜನದ ಸಂಭ್ರಮ ಆರಂಭವಾಗಿದ್ದು, ಮಹಾಮಸ್ತಕಾಭಿಷೇಕ ಸಮಿತಿಯ ಕಚೇರಿ ಉದ್ಘಾಟನೆಯೂ ನೆರವೇರಿದೆ.

















