ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಶೇ. 94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಜಿಲ್ಲಾವಾರು ಸಾಧನೆ: ಕರಾವಳಿ ಜಿಲ್ಲೆಗಳ ದರ್ಬಾರ್
ಫಲಿತಾಂಶದಲ್ಲಿ ಈ ಬಾರಿಯೂ ಕರಾವಳಿ ಜಿಲ್ಲೆಗಳು ಮೇಲುಗೈ ಸಾಧಿಸಿವೆ.
- ದಕ್ಷಿಣ ಕನ್ನಡ: ಜಿಲ್ಲೆಯು ರಾಜ್ಯಕ್ಕೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
- ಉಡುಪಿ: ಅತ್ಯುತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ತೃತಿಯ ಸ್ಥಾನವನ್ನು ಕರಾವಳಿಯ ಜಿಲ್ಲೆಯಾದ ಉತ್ತರ ಕನ್ನಡ ಪಡೆದಿದೆ.
ಪೂರ್ಣ ಅಂಕಗಳ ಸಾಧನೆ: ರಾಜ್ಯದ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ, 7,24,794 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

















