ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ: ಸಿಬಿಎಸ್ಇ ಪರೀಕ್ಷೆಯಲ್ಲಿ ಸತತ ನಾಲ್ಕನೇ ಬಾರಿ ಶೇ.100 ಫಲಿತಾಂಶ

ಉಡುಪಿ: ಉಡುಪಿ ನಗರದ ಪೋದಾರ್ ಅಂತಾರಾಷ್ಟ್ರೀಯ ಶಾಲೆಯು ಈ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿಯ ಸಿಬಿಎಸ್ಇ ಪರೀಕ್ಷೆಯಲ್ಲಿ ಸತತ ನಾಲ್ಕನೇ ಬಾರಿ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.

ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 12 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ 12 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಸಾಧನೆಯಲ್ಲಿ ವಿದ್ಯಾರ್ಥಿನಿ ಪ್ರಾರ್ಥನಾ ಪಿ. ರಾವ್ ಅವರು ಶೇಕಡ 98.33 ಅಂಕಗಳನ್ನು ಪಡೆಯುವುದರೊಂದಿಗೆ ಸಮಾಜ ವಿಜ್ಞಾನ ಹಾಗೂ ಮಾಹಿತಿ ತಂತ್ರಜ್ಞಾನ ವಿಷಯಗಳಲ್ಲಿ ತಲಾ 100 ಅಂಕಗಳನ್ನು ಗಳಿಸಿ ಮೇಲುಗೈ ಸಾಧಿಸಿದ್ದಾರೆ. ಜೊತೆಗೆ ತಾಹ ತೌಸಿಫ್ ಅವರು ವಿಜ್ಞಾನ ವಿಷಯದಲ್ಲಿ 100 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ನೇತ್ರಾ ಹೆಚ್ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ, ಭವಿಷ್ಯದಲ್ಲೂ ಇಂತಹ ಸಾಧನೆಗಳು ಮುಂದುವರಿಯಲಿ ಎಂದು ಹಾರೈಸಿದ್ದಾರೆ.