ಕೆಡಿಪಿ ಸಭೆ ಮುಂದೂಡಿಕೆ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಎಪ್ರಿಲ್ 28 ರಂದು ನಡೆಯಲಿದ್ದ ಕೆಡಿಪಿ ಸಭೆಯನ್ನು ಮುಂದೂಡಲಾಗಿದ್ದು ಸದರಿ ಸಭೆಯು ಮೇ 12 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.