ಉಡುಪಿ: ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.cite.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ಇಲ್ಲಿ ಖುದ್ದಾಗಿ ಅಥವಾ ದೂ.ಸಂಖ್ಯೆ: 9900329668, 8762798115, 9902001790, 7975141464, 8722453232 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.

















