ಉಡುಪಿ: ಬೈಂದೂರು ಇಲ್ಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟ್ರಿಷಿಯನ್, ಫಿಟ್ಟರ್ ಮತ್ತು ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ವೃತ್ತಿಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.cite.karnataka.gov.in ಅಥವಾ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬೈಂದೂರು ಮೊಬೈಲ್ ನಂ: 9980305173, 9741847649 ಹಾಗೂ 9483593148 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.

















