ಭಾರತದ ಐದು ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜಕೀಯ ಕಣ ಸಾಕಷ್ಟು ರೋಚಕ ತಿರುವು ಪಡೆದುಕೊಂಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪುದುಚೆರಿ ರಾಜ್ಯಗಳ ಜೊತೆಗೆ ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಈ ಬಾರಿ ಮತದಾನದ ಪ್ರಮಾಣ ಹೆಚ್ಚಾಗಿರುವುದರಿಂದ ಅಚ್ಚರಿಯ ಫಲಿತಾಂಶಗಳ ನಿರೀಕ್ಷೆ ಹೆಚ್ಚಾಗಿದೆ.
ಈ ಕ್ಷಣದ ಸುದ್ದಿ
ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಓಟದತ್ತ- ಅಸ್ಸಾಂನಲ್ಲಿ ಬಿಜೆಪಿ ಮೂರನೇ ಬಾರಿಗೆ ಗದ್ದುಗೆ ಏರಲಿದೆ. 101 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಬಿಜೆಪಿ ಇದ್ದು, ಕಾಂಗ್ರೆಸ್ ಗೆ ಕೇವಲ 23 ಸ್ಥಾನಗಳ ಮುನ್ನಡೆ, 2 ರಲ್ಲಿ ಇತರೆ ಪಕ್ಷಗಳು ಮುನ್ನಡೆಯಲ್ಲಿವೆ.
ತಮಿಳುನಾಡಲ್ಲಿ ಟಿವಿಕೆ ಗೆಲುವಿನ ಓಟ- ಸದ್ಯ ತಮಿಳುನಾಡಲ್ಲಿ ಟಿವಿಕೆ 110, ಡಿಎಂಕೆ 60 ಹಾಗೂ ಎಐಎಡಿಎಂಕೆ 63 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಗೆ ಗೆಲುವಿನ ಮುನ್ನಡೆ- ಯುಡಿಎಫ್ ಗೆ 100 ಸ್ಥಾನಗಳ ಮುನ್ನಡೆಯೊಂದಿಗೆ ಜಯ ಸಾಧಿಸಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಕಳೆದ ಎರಡು ಬಾರಿಯ ಅಧಿಕಾರ ಈಗ ಕೈಚೆಲ್ಲಿದೆ. ಕೇವಲ 37 ಸ್ಥಾನಕ್ಕೆ ತೃಪ್ತಿಪಟ್ಟಿದೆ. ಯುಡಿಎಫ್ ಬಹುಮತ ಸಾಧಿಸಿದೆ. ವಿಡಿ ಸತೀಸನ್ ಅವರೇ ಸಿಎಂ ಆಗುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಹಿನ್ನೆಡೆ- ಸದ್ಯದ ಟ್ರೆಂಡ್ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷ 97 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ವಿರೋಧ ಪಕ್ಷ ಬಿಜೆಪಿ ಇದೇ ಮೊದಲ ಬಾರಿಗೆ 191 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಇನ್ನು ಕಾಂಗ್ರೆಸ್ ಪಕ್ಷ 3 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಇತರರು 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಕರ್ನಾಟಕ ಉಪಚುನಾವಣೆ
ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಟ್ಟು 97,941 ಮತಗಳನ್ನು ಪಡೆದ ಉಮೇಶ್, ಎದುರಾಳಿ Veeranna Charantimath (ಬಿಜೆಪಿ) ಪಡೆದ 76,075 ಮತಗಳನ್ನು ಮೀರಿಸಿ, 21,866 ಮತಗಳ ಭರ್ಜರಿ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಮತ ಎಣಿಕೆಯ ಮೊದಲ ಸುತ್ತಿನಿಂದಲೇ ಮುನ್ನಡೆ ಸಾಧಿಸಿದ ಅವರು ಕೊನೆಯವರೆಗೂ ಆ ಮುನ್ನಡೆಯನ್ನು ಕಾಯ್ದುಕೊಂಡರು.
ದಾವಣಗೆರೆಯಲ್ಲಿ 13 ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದಿದ್ದು, 9952 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ ಸಮರ್ಥ್ ಶಾಮನೂರ್

















