ಮಂಗಳೂರು: ಬಜಪೆ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ ವಿಚಾರವಾಗಿ ಖಾಸಗಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ.
ಖಾಸಗಿ ಬಸ್ಸಿನ ಚಾಲಕ ಶ್ರೀನಿವಾಸ ಹಾಗೂ ಮತ್ತೊಂದು ಬಸ್ಸಿನ ನಿರ್ವಾಹಕ ಸಂತೋಷ್ ಶೆಟ್ಟಿ ನಡುವೆ ಈ ಗಲಾಟೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗಲೇ, ಪೊಲೀಸರ ಸಮ್ಮುಖದಲ್ಲೇ ಇಬ್ಬರೂ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

















