ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ -1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 16 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 805077004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.