ಮಂಗಳೂರು: ತುಳು ಚಿತ್ರರಂಗದ ಖ್ಯಾತ ಕಲಾವಿದ, ಹಾಗೇ ಇತ್ತೀಚೆಗೆ ಫುಲ್ ಹಿಟ್ ಆದ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಂ ಸೋ” ಚಿತ್ರದ ನಟ, ನಿರ್ದೇಶಕ ಜೆಪಿ ತುಮ್ಮಿನಾಡು ಅವರು ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮೇ 6ರಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮದುವೆ ಸಮಾರಂಭದಲ್ಲಿ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಕುಟುಂಬ ಸದಸ್ಯರು, ಆಪ್ತರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದ ಮದುವೆ ಶಾಸ್ತ್ರಗಳು ನಡೆದಿದ್ದು, ಮಾಂಗಲ್ಯಧಾರಣೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಜೆಪಿ ತುಮ್ಮಿನಾಡು ತುಳು ರಂಗಭೂಮಿಯಿಂದ ತಮ್ಮ ಕಲಾ ಪಯಣ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ ರಶ್ಮಿಕಾ ಅವರ ಪರಿಚಯವಾಗಿ, ಸ್ನೇಹ ಪ್ರೀತಿಗೆ ತಿರುಗಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

















