ಮಣಿಪಾಲ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ; ಶಾಂತಿನಗರ ಸಮೀಪದ ಮಹಿಳಾ ಪಿಜಿಯಲ್ಲಿ ಘಟನೆ.

ಉಡುಪಿ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿಯಿಂದ ಇರಿದ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ನಡೆದಿದೆ.
ಅಂಕೋಲ ಮೂಲದ ಯೋಗಿತಾ(23) ಮಾರಣಾಂತಿಕ ಹಲ್ಲೆಗೊಳಗಾದ ಯುವತಿ. ಈಕೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದಳು. ಮಂಗಳವಾರ ರಾತ್ರಿ ಆಕೆಗೆ ಚೂರಿ ಇರಿಯಲಾಗಿದೆ. ಯುವತಿಯು ಪ್ರೀತಿ ನಿರಾಕರಿಸಿರುವುದಕ್ಕೆ ಭಗ್ನ ಪ್ರೇಮಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಗಂಭೀರ ಗಾಯಗೊಂಡಿರುವ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.