ಮಣಿಪಾಲ: ಮಕ್ಕಳಲ್ಲಿ ಇಂಗ್ಲಿಷ್ ವ್ಯಾಕರಣ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ವತಿಯಿಂದ ವಿಶೇಷ “Polish Your Grammar With Us” ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
10ರಿಂದ 14 ವರ್ಷದ ಮಕ್ಕಳಿಗಾಗಿ ರೂಪಿಸಲಾದ ಈ ಮನರಂಜನಾತ್ಮಕ ಹಾಗೂ ಸಂವಾದಾತ್ಮಕ ತರಬೇತಿ ಶಿಬಿರವು ಮೇ 18 ಮೇ. 23 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಣಿಪಾಲದ ಕ್ರಿಸ್ಟಲ್ ಬಿಜ್ಹಬ್ನಲ್ಲಿ ತರಗತಿಗಳು ನಡೆಯಲಿವೆ.
ಮಕ್ಕಳಲ್ಲಿ ಇಂಗ್ಲಿಷ್ ವ್ಯಾಕರಣ ಜ್ಞಾನ, ಆತ್ಮವಿಶ್ವಾಸ ಹಾಗೂ ಭಾಷಾ ಕೌಶಲ್ಯ ವೃದ್ಧಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9901722527 ಹಾಗೂ 8277571883 ಸಂಖ್ಯೆಯನ್ನು ಸಂಪರ್ಕಿಸಬಹುದು.

















