ಉಡುಪಿ: ಮೇ 17ರಂದು ಶಿವಾಜಿ ಜಯಂತ್ಯೋತ್ಸವ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಉಡುಪಿ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ವಿದ್ಯಾರ್ಥಿವೇತನ ಮತ್ತು ಸಹಾಯಧನ ವಿತರಣಾ ಸಮಾರಂಭ ಮೇ 17 ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದಾರ್ತಿಯ ಕರ್ನಾಟಕ ಮರಾಠ ಪರಿಷತ್ ನಿವೇಶನದಲ್ಲಿ ನಡೆಯಲಿದೆ ಎಂದು ಪರಿಷತ್ ನ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಮಂದಾರ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್ .ಧನಂಜಯ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪರಿಷತ್ ನ ರಾಜ್ಯಾಧ್ಯಕ್ಷ ಎಸ್ ಸುರೇಶ್ ರಾವ್ ಸಾಠೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ,ಸ್ಥಳೀಯ ಶಾಸಕ ಕಿರಣ್ ಕೊಡ್ಗಿ ,ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ರಾವ್ ಮಾನೆ, ಸತೀಶ್ ರಾವ್ ಪವರ್, ಮಧ್ವೇಶ್ ರಾವ್ ಬಹುಮಾನ್ ಉಪಸ್ಥಿತರಿದ್ದರು.