ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಕೃತಕ ಅಂಗ ಜೋಡಣೆಗೆ ಮತ್ತು ಶಸ್ತ್ರಚಿಕಿತ್ಸೆಗೆ ಸಹಾಯಧನ ಸೌಲಭ್ಯ ಪಡೆಯಲು, ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮೇ 25 ರ ಒಳಗಾಗಿ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.