ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಇಂದು (ಮೇ 17) ಮಲ್ಪೆ ಬೀಚ್ ನಲ್ಲಿ ವಿವಿಧ ಸಾಂಪ್ರದಾಯಿಕ ಕ್ರೀಡಾಕೂಟ ಸ್ಪರ್ಧೆಗಳು, ಸಂಜೆ 6 ಗಂಟೆಗೆ ಮಲ್ಪೆ ಕಡಲ ತೀರದಲ್ಲಿ ವಾರಣಾಸಿಯ ಪುರೋಹಿತರಿಂದ ಗಂಗಾರತಿ ನೆರವೇರಲಿದೆ.
ರಾತ್ರಿ 8ಕ್ಕೆ ದಕ್ಷಿಣ ಭಾರತದ ಖ್ಯಾತ ಹಾಡುಗಾರ್ತಿ ಮಂಗ್ಲಿ ಅವರು ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರಸ್ತುಪಡಿಸಲಿದ್ದಾರೆ.


















