ಮಂಗಳೂರು: ಮಂಗಳೂರಿನ ಯುವಕನೊಬ್ಬ ನೆಟ್ಟಣದಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಸಮೀಪ ಸೋಮವಾರ ರಾತ್ರಿ ನಡೆದಿದ್ದು, ಸ್ಥಳೀಯ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಯುವಕನ ಮೃತದೇಹವು ಕಂಡು ಬಂದಿದೆ. ಕೂಡಲೇ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹದ ಪಕ್ಕ ಬ್ಯಾಂಕ್ ಪಾಸ್ ಪುಸ್ತಕವೊಂದು ಸಿಕ್ಕಿದ್ದು, ಅದರಲ್ಲಿ ಮಂಗಳೂರಿನ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ ನಿವಾಸಿ ಪವನ್ ಕುಮಾರ್ ಎಂಬ ವಿಳಾಸ ಪತ್ತೆಯಾಗಿದೆ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.












