ಮಂಗಳೂರು: ಬೈಕ್ ಅಪಘಾತ ಮೂವರಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಹೊರವಲಯ ಕಲ್ಲಾಪು ಸಮೀಪದ ಆಡಂಕುದ್ರುವಿನಲ್ಲಿ  ನಡೆದ ಬೈಕ್ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ ಘಟನೆ ನಡೆದಿದೆ.
ಬೈಕ್ ಸವಾರನು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಹಾಗೂ ಸಹ ಸವಾರರಿಬ್ಬರಿಗೂ ಗಾಯಗಳಾಗಿವೆ.
ಮೂವರು ಗಾಯಾಳುಗಳನ್ನು ಸ್ಥಳಿಯರು ನಗರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಮಂಗಳೂರು ಸಂಚಾರ ದಕ್ಷಿಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.