ಮಂಗಳೂರು: “ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಕೆ.ಎಸ್. ಪ್ರಭಾಕರ್ ಐಎಎಸ್ ಭೇಟಿ”

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಮಂಗಳೂರು ಕೇಂದ್ರ ಕಚೇರಿ ವಿಶ್ವ ಸೌಧಕ್ಕೆ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಐಎಎಸ್ ಅವರು ಮೇ 19ರಂದು ಭೇಟಿ ನೀಡಿದರು.

ಸಂಸ್ಥೆಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಹಾಗೂ ಆಡಳಿತ ಮಂಡಳಿ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು ಸ್ವಾಗತಿಸಿ, ಗೌರವಿಸಿ ಸನ್ಮಾನಿಸಿದರು.