‘ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಂಭವ. ನವೀನ್ ಡಿಸೋಜ ಹೆಸರು ಮುಂಚೂಣಿಯಲ್ಲಿ’

ಬೆಂಗಳೂರು: ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕ್ರಿಶ್ಚಿಯನ್ ಸಂಖ್ಯೆಯಲ್ಲಿರುವ ದಕ್ಷಿಣ ಕನ್ನಡದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಹುದ್ದೆ ಸಿಗಬಹುದು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.