ರಾಜ್ಯದಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಉಂಟಾಗಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ರಾಜ್ಯ ಸರ್ಕಾರ 51 ಸಾವಿರ ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ಅನುಮೋದನೆ ನೀಡಿದೆ. 2026-27ನೇ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆ ಶಾಲೆಗಳ ಪಾಠಚಟುವಟಿಕೆ ಅಡಚಣೆಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಆದೇಶದಂತೆ, ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಮತ್ತು ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಖಾಯಂ ಶಿಕ್ಷಕರ ನೇಮಕಾತಿ ಆಗುವವರೆಗೆ ಅಥವಾ 2026-27ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಈ ನೇಮಕಾತಿ ಜಾರಿಯಲ್ಲಿರಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.