ಮಣಿಪಾಲ: ಕಳೆದ 14 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ, ೨೦೨೫-೨೬ ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಉದ್ಯೋಗ ಲಭಿಸಿದೆ.
ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು, ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರವನ್ನು ನೀಡುತ್ತದೆ.
ಈ ಕೋರ್ಸಿಗೆ ಪ್ರವೇಶಾತಿ (2026-27)ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು.
ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ.ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆ(9901722527)ಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.

















