ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಸಂಕಲ್ಪದೊಂದಿಗೆ ಕಟೀಲಿನಲ್ಲಿ ರಂಗ ಪೂಜೆ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಿನ್ನಿಗೋಳಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಮೇ 31ರಂದು ರಾತ್ರಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನೆರವೇರಿಸಲಾಯಿತು.

ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ D. K. Shivakumar ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿ ಯಾವುದೇ ಅಡೆತಡೆಗಳಿಲ್ಲದೆ ಉತ್ತಮ ಆಡಳಿತ ನೀಡಲೆಂಬ ಸಂಕಲ್ಪದೊಂದಿಗೆ ಈ ಪೂಜೆ ಆಯೋಜಿಸಲಾಗಿತ್ತು.

ಕಟೀಲು ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ಶ್ರೀ ದುರ್ಗಾ ಪರಮೇಶ್ವರಿಗೆ ಪ್ರಿಯವಾದ ರಂಗ ಪೂಜೆ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಿನ್ನಿಗೋಳಿ ವಲಯದ ಜನಪ್ರತಿನಿಧಿಗಳು, ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.