ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ twd.karnataka.gov.in (Post matric(PUC /Degree / PG)prize money) ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಐ.ಟಿ.ಡಿ.ಪಿ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಐ.ಟಿ.ಡಿ.ಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.