ಕಲಾತಂಡ ಮತ್ತು ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ಸಾಂಸ್ಕೃತಿಕ ಸಂಬoಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬoಧಿಸಿದoತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದ್ದು, ಸಂಸ್ಥೆಯ ವತಿಯಿಂದ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪಾನೆಲ್ ಮಾಡುವ ಜೊತೆಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚರಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ಜೂನ್ 12 ರ ಒಳಗಾಗಿ ವೆಬ್‌ಸೈಟ್ www.kannadasiri.karnataka.gov.in ಅರ್ಜಿಯನ್ನು ಪಡೆದು, ಅವುಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.