ಉಡುಪಿಯಲ್ಲಿದೆ ಮಹಿಳೆಯರಿಗಾಗಿ ಎಂಎನ್‌ಸಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ: ನಗರದಲ್ಲಿ ಮಹಿಳೆಯರಿಗಾಗಿ ಬಹುರಾಷ್ಟ್ರೀಯ ಕಂಪನಿ (MNC)ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 30 ರಿಂದ 45 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

ಭಾಗಕಾಲಿಕ (Part-time) ಹುದ್ದೆಗಳಿಗೆ 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಶಾಶ್ವತ ಹುದ್ದೆಗಳಿಗೆ ಪದವೀಧರರು (Graduates) ಮಾತ್ರ ಅರ್ಹರಾಗಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ರಿಂದ ₹60,000 ವರೆಗೆ ವೇತನ, ಬೋನಸ್ ಸೌಲಭ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರವಾಸಗಳ ಅವಕಾಶ ಸೇರಿದಂತೆ ವಿವಿಧ ಕಾರ್ಪೊರೇಟ್ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಜೊತೆಗೆ ಇಎಸ್‌ಐ (ESI), ಪಿಎಫ್‌ (PF) ಸೇರಿದಂತೆ ಇತರೆ ಉದ್ಯೋಗಿ ಕಲ್ಯಾಣ ಸೌಲಭ್ಯಗಳೂ ಲಭ್ಯವಿರಲಿವೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ (Resume)ಯನ್ನು 9343349670 ಸಂಖ್ಯೆಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಿ.