ಎಸ್‌ಎಂಎಸ್ ಪದವಿಪೂರ್ವ ಕಾಲೇಜು, ಬ್ರಹ್ಮಾವರದಲ್ಲಿ ವಿದ್ಯಾರ್ಥಿ ನಾಯಕನ ಚುನಾವಣೆ ಯಶಸ್ವಿ.

ಬ್ರಹ್ಮಾವರ: ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನಲಿ (SMS PU College) 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ನಾಯಕನ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಯಿತು. ಚುನಾವಣೆಯು ಗುಪ್ತ ಮತದಾನ (Secret Ballot) ಪದ್ಧತಿಯ ಮೂಲಕ ನಡೆದಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ವಿದ್ಯಾರ್ಥಿ ನಾಯಕನ ಹುದ್ದೆಗೆ ಆರು ವಿದ್ಯಾರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿ ಸ್ಪರ್ಧಿಸಿದ್ದರು. ಮತದಾನ ಪ್ರಕ್ರಿಯೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಐವನ್ ಡೊನಾತ್ ಸುವಾರಿಸ್ ಹಾಗೂ ಉಪನ್ಯಾಸಕರ ಮೇಲ್ವಿಚಾರಣೆಯಲ್ಲಿ ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸಲಾಯಿತು.
ಮತ ಎಣಿಕೆಯ ನಂತರ ಮಹಮ್ಮದ್ ಸಾದ್ ಅಲಿಫ್ ಅವರು ಬಹುಮತದೊಂದಿಗೆ ವಿಜೇತರಾಗಿ ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾದರು.

ಚುನಾವಣೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಂತಿಯುತವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಇಂತಹ ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿತನ ಹಾಗೂ ಪ್ರಜಾಪ್ರಭುತ್ವದ ಅರಿವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ವಿಜೇತ ವಿದ್ಯಾರ್ಥಿ ನಾಯಕ ಮಹಮ್ಮದ್ ಸಾದ್ ಅಲಿಫ್ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.