ಉಡುಪಿ: ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯ ಶಿಕ್ಷಣ ಪದ್ಧತಿಯಂತೆ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) – ಸ್ನಾತಕ ಪದವಿ ತರಗತಿಗಳ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ / ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್ಸೈಟ್ htts://uucms.karnataka.gov.inನಲ್ಲಿ ಆನ್ಲೈನ್ ಮೂಲಕ ಜೂನ್ 12 ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸದರಿ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಚಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂನ್ 15 ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂಖ್ಯೆ: 0821-2438931 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















