ಉಡುಪಿ: ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಇಲ್ಲಿ ಜೂನ್ 18 ರಂದು ಬೆಳಿಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಡಿಪ್ಲೋಮಾ ಮೆಕ್ಯಾನಿಕಲ್ ಮತ್ತು ಸಿಎನ್ಸಿ ಪ್ರಿಂಟಿoಗ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

















