ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್ & ಗೈಡ್ಸ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಜೂನ್ 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಆಯುಷ್ ನಿರ್ದೇಶನಾಲಯದ ಆಯುಕ್ತ ಸುನಿಲ್ ಪನ್ವಾರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಯುಷ್ ವೈದ್ಯಕೀಯ ಚಿಕಿತ್ಸಾ ಪದ್ಧತಿಯ ಭಾಗವಾದ ಯೋಗಾಭ್ಯಾಸದಲ್ಲಿ ಭಾಗವಹಿಸಿ “ಅಂತಾರಾಷ್ಟ್ರೀಯ ಯೋಗ ದಿನಾಚರಣೆ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

















