ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ: ಐಎಂಡಿ

ಬೆಂಗಳೂರು: ರಾಜ್ಯದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದೆ. ಆದರೂ, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ದುರ್ಬಲ ಮುಂಗಾರು ಇರಲಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ 24 ರವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 22, 23 ಮತ್ತು 25 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಮಾಹಿತಿ ನೀಡಿದೆ.
ನಿನ್ನೆ(ಜೂನ್ 21) ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ, ಚಿಕ್ಕಬಳ್ಳಾಪುರ ಭಾಗದಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ.