ಉಡುಪಿ ಪ್ರಕೃತಿ ಕ್ಲಬ್‌ನ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ

ಉಡುಪಿ: ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಲ| ಪ್ರಮೋದ್ ಕುಮಾರ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಲ| ಪ್ರಶಾಂತ್ ಶೀರೂರು ಅವಿರೋಧವಾಗಿ ಖಜಾಂಚಿ ಯಾಗಿ ಲ | ಸದಾಶಿವ ಶೆಟ್ಟಿ ಉಪಾಧ್ಯಕ್ಷರಾಗಿ ಲ | ಸುಧಾಕರ್ ವಿ ಶೆಟ್ಟಿ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆಯ ಹಿನ್ನೆಲೆಯಲ್ಲಿ ಕ್ಲಬ್ ಸದಸ್ಯರು ಅಭಿನಂದನೆ ಸಲ್ಲಿಸಿ, ಅವರ ನೇತೃತ್ವದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಹಾಗೂ ಜನಪರ ಚಟುವಟಿಕೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಲಿ ಎಂದು ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಕ್ಲಬ್‌ನ ಹಿರಿಯ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ತಂಡಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.