ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿದೆ ಉದ್ಯೋಗಾವಕಾಶ; ಸ್ಕಿಲ್ ಟ್ರೈನರ್ ಹುದ್ದೆಗೆ ಅರ್ಜಿ ಆಹ್ವಾನ

ಮಣಿಪಾಲ: ಡಾ. ಟಿಎಂಎ ಪೈ ಫೌಂಡೇಶನ್‌ನ ಘಟಕವಾಗಿರುವ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ತನ್ನ ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ವಿಭಾಗಕ್ಕೆ ಸ್ಕಿಲ್ ಟ್ರೈನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಮಣಿಪಾಲದ ಈಶ್ವರನಗರದಲ್ಲಿರುವ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆ, ಮಾಹಿತಿ ತಂತ್ರಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಭವಿಷ್ಯ ರೂಪಿಸುವ ಉತ್ಸಾಹಿ ತರಬೇತುದಾರರನ್ನು ತನ್ನ ತಂಡಕ್ಕೆ ಆಹ್ವಾನಿಸಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅನುಭವ ಹಾಗೂ ಬೋಧನಾ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗಳು ಲಭ್ಯವಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಭಾಗಿಯಾಗಲು ಇದು ಉತ್ತಮ ಅವಕಾಶವಾಗಿದೆ.

ಅರ್ಹತೆಗಳೇನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಎಸ್, ಕಂಪ್ಯೂಟರ್ ಸೈನ್ಸ್, ಕೃತಕ ಬುದ್ಧಿಮತ್ತೆ (AI), ಸೈಬರ್ ಸೆಕ್ಯುರಿಟಿ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಟೆಕ್, ಎಂಸಿಎ, ಐಟಿ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂ.ಎಸ್‌ಸಿ, ಎಂ.ಕಾಂ, ಹಾಗೂ ಐಟಿ/ಫೈನಾನ್ಸ್/ಡಿಜಿಟಲ್ ಮಾರ್ಕೆಟಿಂಗ್ ವಿಭಾಗದಲ್ಲಿ ಎಂಬಿಎ ಪದವಿಯನ್ನು ಹೊಂದಿರಬೇಕು.

ಅಭ್ಯರ್ಥಿಗಳಲ್ಲಿ ಕ್ಷೇತ್ರದ ಪ್ರಾಯೋಗಿಕ ಜ್ಞಾನ, ಬೋಧನೆಯಲ್ಲಿ ಹೊಸತನ, ಅನುಭವ ಮತ್ತು ವಿದ್ಯಾರ್ಥಿಗಳ ಯಶಸ್ಸಿನತ್ತ ಬದ್ಧತೆ ಇರಬೇಕು ಎಂದು ಸಂಸ್ಥೆ ತಿಳಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ವೇತನ, ವೃತ್ತಿಪರ ಬೆಳವಣಿಗೆಗೆ ಅವಕಾಶ, ಆಧುನಿಕ ಪ್ರಯೋಗಾಲಯ ಮತ್ತು ಮೂಲಸೌಕರ್ಯ, ಜೊತೆಗೆ ಉತ್ತಮ ಕಾರ್ಯ ವಾತಾವರಣವನ್ನು ಒದಗಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ವಿವರ (ರೆಸ್ಯೂಮ್) ಅನ್ನು [email protected] ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ 8088318437 ಸಂಪರ್ಕಿಸಿ.

ಮಣಿಪಾಲದ ಈಶ್ವರನಗರದಲ್ಲಿರುವ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆ, ಮಾಹಿತಿ ತಂತ್ರಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಭವಿಷ್ಯ ರೂಪಿಸುವ ಉತ್ಸಾಹಿ ತರಬೇತುದಾರರನ್ನು ತನ್ನ ತಂಡಕ್ಕೆ ಆಹ್ವಾನಿಸಿದೆ.