ಉಡುಪಿ ಬಿಜೆಪಿ ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ

ಉಡುಪಿ: ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ಎಸ್.ಟಿ ಮೋರ್ಚಾ ಜಿಲ್ಲಾ ಕಚೇರಿಯಲ್ಲಿ ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಿಸುವ ಕಾರ್ಯಕ್ರಮ ಮೋರ್ಚಾದ ಅಧ್ಯಕ್ಷರಾದ ಭುಜಂಗ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರ್ ನವೀನ್ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ನಡೆಯಿತು.

ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುತ್ಯಾರು ನವೀನ್ ಶೆಟ್ಟಿ ಅವರು ಪದಾಧಿಕಾರಿಗಳ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು. ಎಸ್.ಟಿ ಮೋರ್ಚಾದ ಪದಾಧಿಕಾರಿಗಳು ತಮ್ಮ ತಮ್ಮ ಪರಿಚಯ ಮಾಡಿಕೊಂಡ ಬಳಿಕ ನಿಯುಕ್ತಿ ಪತ್ರವನ್ನು ನೀಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ಭುಜಂಗ ನಾಯ್ಕ್ ಇವರು ಅಧ್ಯಕ್ಷೀಯ ಭಾಷಣದಲ್ಲಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸಿದರು.

ನೂತನವಾಗಿ ಆಯ್ಕೆಯಾದ ಮೋರ್ಚಾದ ಎಲ್ಲಾ ಪದಾಧಿಕಾರಿಗಳಿಗೂ, ಕಾರ್ಯಕಾರಿಣಿ ಸದಸ್ಯರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ, ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್ ನೂಜಿನ ಬೈಲ್, ಸುಭಾಷ್ ನಾಯ್ಕ್ ಪೆರ್ಡೂರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಇವರು ನಿರೂಪಿಸಿದರು.

ಉಮೇಶ್ ಎ.ನಾಯ್ಕ್ ಚೇರ್ಕಾಡಿ ಎಲ್ಲರನ್ನು ಸ್ವಾಗತಿಸಿದರು, ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಧನ್ಯವಾದ ಸಲ್ಲಿಸಿದರು.