ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ “ಸ್ಪೂರ್ತಿ ಮಾತು” ಕಾರ್ಯಕ್ರಮ.

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಸ್ಪೂರ್ತಿ ಮಾತು ಸರಣಿ 16 ನೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ‘ನಿಮ್ಮ ಶಕ್ತಿ ನಿಮ್ಮಲ್ಲೇ ಇದೆ ‘ಎಂಬ ಶೀರ್ಷಿಕೆಯಡಿ ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿಯ ಕನ್ನಡ ವಿಭಾಗದ ಪ್ರಾಧ್ಯಾಪಕರು, ಕವಿ ಹಾಗೂ ಲೇಖಕರು ಆಗಿರುವ ಡಾ. ಪಿ. ಬಿ. ಪ್ರಸನ್ನ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಕೇವಲ ಅಂಕಗಳಿಕೆ ಅಷ್ಟೇ ಮುಖ್ಯವಲ್ಲ. ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಜೊತೆಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಬಹಳ ಮುಖ್ಯ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೊದಲು ನಿಮಗೆ ನೀವೇ ಸ್ಪರ್ಧಿಗಳು, ನಿಮ್ಮ ವಿರೋಧಿ ಮನಸ್ಥಿತಿ ಯ ವಿರುದ್ಧ ನೀವು ಗೆದ್ದು ಗುರಿ ತಲುಪುವಂತೆ ಕರೆ ನೀಡಿದರು. ಹಾಸ್ಯ ಚಟಾಕಿಗಳ ಮೂಲಕ ತಮ್ಮ ಅನುಭವವನ್ನು ಬೆರೆಸುವುದರೊಂದಿಗೆ, ಪ್ರೇರಣಾದಾಯಕ
ಮಾತುಗಳಾಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಸ್ತಾವಿಕ ನುಡಿಗಳನ್ನಾಡಿದರು. ಜೊತೆಗೆ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕನ್ನಡ ಉಪನ್ಯಾಸಕ ಆದರ್ಶ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.