ಉಡುಪಿ: ಅಕ್ರಮ ಮದ್ಯ ಮಾರಾಟ; ಓರ್ವ ಬಂಧನ

ಉಡುಪಿ: ನಗರದ ಹಳೆ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ನಗರ ಠಾಣೆ ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬಾಗಲಕೋಟೆ ಮೂಲದ ಕಂಟ್ಯಪ್ಪ ಮೇಥಿ (32) ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಸಿಟಿ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಸುಮಾರು 4 ಲೀಟರ್ ಮದ್ಯ ಪತ್ತೆಯಾಗಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಕ್ರಮಕ್ಕೆ ಒಳಪಡಿಸಲಾಗಿದೆ.

ನಗರ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಉಪನಿರೀಕ್ಷಕ ಭರತೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹೆಡ್ ಕಾನ್ ಸ್ಟೇಬಲ್ ಬಶೀರ್ ಭಾಗವಹಿಸಿದ್ದರು. ಕಾರ್ಯಾಚರಣೆಗೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಸಹಕರಿಸಿದ್ದರು.