ಮೆಸ್ಕಾಂ ಜನ ಸಂಪರ್ಕ ಸಭೆ

ಉಡುಪಿ: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಜುಲೈ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08259-280300 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂ ಕಚೇರಿ ಪ್ರಕಟಣೆ ತಿಳಿಸಿದೆ.