ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ., ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಸಹಕಾರ ಇಲಾಖೆ, ಉಡುಪಿ ಜಿಲ್ಲಾ ಪೊಲೀಸ್ ಮತ್ತು ಹಿರಿಯಡ್ಕ ಪೊಲೀಸ್ ಠಾಣೆ ಇವರ ಸಹಯೋಗದೊಂದಿಗೆ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ವನ್ನು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ 5 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ 2026 ನ್ನು ಹಿರಿಯಡ್ಕ ಗ್ರೀನ್ ಪ್ರಾರ್ಕ್ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕರಾದ ಶ್ರೀ ಅರುಣ ಕುಮಾರ್ ಶೆಟ್ಟಿ ವಹಿಸಿದ್ದು, ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಪುನೀತ್ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾದಕ ದ್ರವ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು . ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರು, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ., ನ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಉಡುಪಿ ಜಿಲ್ಲೆ ಶ್ರೀಮತಿ ಲಾವಣ್ಯ ಕೆ. ಆರ್, ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀಮತಿ ಕ್ಲಾರಿನಾ ನಿಕೋಲಸ್, ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಪವನ್ ಕುಮಾರ್ (Cyber Crime ) ಇವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಜಾಗ್ರತಿ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ನ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅನುಷಾ ಕೋಟ್ಯಾನ್, ಶಾಲೆಯ ಆಡಳಿತ ವರ್ಗ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















