ಉಡುಪಿ ಜುಲೈ 07: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ ವ್ಯಕ್ತಿಯು ಜೂನ್ 28 ರಂದು ಸಂಜೆ 7.30 ರ ಸುಮಾರಿಗೆ ತನ್ನ ಮಗನೊಂದಿಗೆ ಗಲಾಟೆ ಮಾಡಿ, ಮನೆ ಬಿಟ್ಟು ಹೋಗುವುದಾಗಿ ಹೇಳಿ ತನ್ನ ಓಮ್ನಿ ಕಾರಿನಲ್ಲಿ ಬಟ್ಟೆಬರೆಯೊಂದಿಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ, ತಮಿಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-23108, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.















