ಜು. 10 ರಂದು ನೇರ ಸಂದರ್ಶನ

ಉಡುಪಿ: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s ಎದುರಿನ v2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.