ಕಟಪಾಡಿಯ ಎಸ್. ವಿ. ಎಸ್ ಹಾಲ್ ನಲ್ಲಿ ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ವತಿಯಿಂದ ವಿದ್ಯಾರ್ಥಿ ಪರಿಷತ್ ಉದ್ಘಾಟನ ಸಮಾರಂಭ ಹಾಗು ಫ್ರೆಷೆರ್ಸ್ ಡೇ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ, ಶಿಸ್ತು ಮತ್ತು ಉತ್ಸಾಹದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲ ಕೃಷ್ಣ ಭಟ್ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನಾಯಕತ್ವದ ಗುಣ, ಶಿಸ್ತು, ಸಮಯಪಾಲನೆ ಹಾಗು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.
2026-27ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಯನ್ನು ಘೋಷಿಸಲಾಯಿತು ಬಳಿಕ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ನೂತನ ವಿದ್ಯಾರ್ಥಿ ಪರಿಷತ್ ಸದಸ್ಯರಿಗೆ ಪ್ರಮಾಣವಚನ ಭೋದಿಸಿ ನಾಯಕತ್ವ ಜವಾಬ್ದಾರಿ ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿ ತನುಷಾ ಆಚಾರ್ಯ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಶಿವಂ ಬಂಗೇರ ಸ್ವಾಗತಿಸಿ ಪ್ರಗತಿ ದನ್ಯವಾದದೊಂದಿಗೆ ಮುಕ್ತಾಯವಾಯಿತು.















