ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಮತ್ತು 18 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ (ಲ್ಯಾಂಡ್‌ಸೈಡ್) ಸಂಭವಿಸುವ ಆತಂಕ ಎದುರಾಗಿದೆ.
ಈ ಕುರಿತು ಭಾರತೀಯ ಹವಾಮಾನ ಇಲಾಖೆ (IMD) ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.















