ಬೆಳ್ತಂಗಡಿ:ಮ್ಯಾಟ್ರಿಮೋನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯಿಂದ 87 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ನಿವಾಸಿಯಾದ ಉದ್ಯಮಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಅನಿಷಾ ಪಾಲನ್ನ (35) ಎಂಬ ಯುವತಿಯ ಪರಿಚಯವಾಗಿದೆ. ಬಳಿಕ ಆರೋಪಿತೆಯ ಜೊತೆ ದೂರುದಾದರು ಇನ್‌ಸ್ಟಾಗ್ರಾಂ ಮತ್ತು ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಮದುವೆಯಾಗುವುದಾಗಿ ನಂಬಿಸಿ ಆರೋಪಿತೆ ದೂರುದಾರರಿಗೆ ಕರೆ ಮಾಡಿ ಬೇರೆ ಬೇರೆ ಕಾರಣಗಳನ್ನು ನೀಡಿ ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು ರೂ. 87,22,710 ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಬಳಿಕ ಆರೋಪಿತೆ ಮೊಬೈಲ್ ಸಂಪರ್ಕಕ್ಕೆ ಸಿಗದೆ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂ : 78/2026 ಕಲಂ: 318(4)BNS-2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.















