ಧನ ಸಹಾಯ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸoಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಹರಿಂದ Sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 20 ರ ಸಂಜೆ 5.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-24410574, 080-22213530, 9986837037, 08022241325 ಅನ್ನು ಕಛೇರಿ ಅವಧಿಯಲ್ಲಿ ಹಾಗೂ ಧನಸಹಾಯಕ್ಕೆ ಅರ್ಜಿ ಸಲ್ಲಿಸಲು ಅನ್ವಯಿಸುವ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್: http://www.kannadasiri.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.