ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಉಡುಪಿ, 28 ಜುಲೈ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎನ್ ಸಿ ಸಿ ಘಟಕವು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ತೋರಿದ ಧೈರ್ಯ ಮತ್ತು ತ್ಯಾಗವನ್ನು ಗೌರವಿಸುವ ಸಲುವಾಗಿ ದಿನಾಂಕ 25 ಜುಲೈ 2026 ರಂದು “ಕಾರ್ಗಿಲ್ ವಿಜಯ್ ದಿವಸ್” ಅನ್ನು ದೇಶ ಭಕ್ತಿಯಿಂದ ಆಚರಿಸಲಾಯಿತು.

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಮಾಜಿ ಸೈನಿಕ ಸುಬೇದಾರ್ ರವೀಂದ್ರ ಕಾಮತ್ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಇವರು ಮಾತನಾಡಿ ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಆದ ಅನುಭವಗಳನ್ನು ಹಂಚಿಕೊಂಡರು ಹಾಗೂ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ, ದೃಡತೆ ಮತ್ತು ತ್ಯಾಗಗಳನ್ನು ಸ್ಮರಿಸಿದರು. ವಿಶೇಷವಾಗಿ ಎನ್‍ಸಿಸಿ ಕೆಡೆಟ್‍ಗಳು ಸೇರಿದಂತೆ ಯುವಜನರು ಸೇನೆಗೆ ಸೇರುವ ಮೂಲಕ ದೇಶ ಸೇವೆಯಲ್ಲಿ ಪಾಲ್ಗೋಳ್ಳುವಂತೆ ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ದೇಶಕ್ಕೆ ಸಲ್ಲಿಸಿದ
ನಿಷ್ಠಾವಂತ ಸೇವೆ ಹಾಗೂ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ಸುದರ್ಶನ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.