ಉಡುಪಿ: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ವಿವಿಧ ಪ್ರಶಸ್ತಿ, ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಯೋಜನೆಗಳಿಗಾಗಿ ಸೇವಾಸಿಂಧು ಆನ್ಲೈನ್ ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ: 0820-2521324, 9845432303 ಅಥವಾ ಯುವ ಸಹಾಯವಾಣಿ: 155265 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.















