ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಛಾಪಾ ಕಾಗದದಲ್ಲಿ ಹಬ್ ಪರಭಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆಗಸ್ಟ್ 19 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.















