ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅವರು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆಯಲ್ಲಿ ಘೋಷಿಸಿರುವ ಮೊತ್ತವನ್ನು ಶೀಘ್ರವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಬಗ್ಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಒಂದು ವಾರದೊಳಗೆ ಮಹಿಳಾ ಮೀನುಗಾರರ ಖಾತೆಗಳಿಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.












